ವಿಜಯಪುರ
ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ
ವಿಜಯಪುರ: ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ದೈವಾಧೀನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್ ಡಿ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು.