ಸಿನಿಮಾ

ಕನ್ನಡದ ಹೆಸರಾಂತ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ

ಹೃದಯಾಘಾತ ಸಂಭವಿಸಿದ್ದರಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ (Lakshman) ಅವರು ಇಂದು (ಜನವರಿ 23) ನಿಧನ ಹೊಂದಿದ್ದಾರೆ.

ಹೃದಯಾಘಾತ ಸಂಭವಿಸಿದ್ದರಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಲಕ್ಷ್ಮಣ್​ ನಿಧನಕ್ಕೆ ಸ್ಯಾಂಡಲ್​​ವುಡ್ (Sandalwood) ಸೆಲೆಬ್ರಿಟಿಗಳು ಹಾಗೂ ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.

ಭಾನುವಾರ (ಜನವರಿ 22ರಂದು) ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

ಲಕ್ಷ್ಮಣ್ ಅವರು ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು. ವೃತ್ತಿ ಜೀವನದಲ್ಲಿ 200ಕ್ಕೂ ಅಧಿಕ ಸಿನಿಮಾಗಳಲ್ಲಿ ಲಕ್ಷ್ಮಣ್ ಬಣ್ಣ ಹಚ್ಚಿದ್ದರು. ‘ಒಲವಿನ ಉಡುಗೊರೆ’, ‘ಸಾಂಗ್ಲಿಯಾನ’ ಮೊದಲಾದ ಸಿನಿಮಾಗಳಲ್ಲಿಅವರು ಬಣ್ಣ ಹಚ್ಚಿದ್ದರು. ಅಂಬರೀಷ್​, ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಕನ್ನಡದ ದಿಗ್ಗಜರ ಜೊತೆ ಅವರು ತೆರೆ ಹಂಚಿಕೊಂಡಿದ್ದರು.

ಪುಣ್ಯ ಗೌಡ ಟಿವಿ8ಕನ್ನಡ  ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button