ಬೆಳಗಾವಿ

ಮಹಾನಾಯಕನ ವಿರುದ್ಧ ಸಿಡಿದೆದ್ದ ಸಾಹುಕಾರ್: ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ ಸುದ್ದಿಗೋಷ್ಠಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ ಮಹಾನಾಯಕನ ಷಡ್ಯಂತ್ರ ಬಯಲುಗೊಳಿಸುವುದೇ ನನ್ನ ಟಾರ್ಗೆಟ್ ಎಂದು ಸ್ವಕ್ಷೇತ್ರ ಗೋಕಾಕ್ ನಲ್ಲಿ ನಡೆದ ಸಮಾವೇಶದಲ್ಲಿ ಹೇಳಿದ್ದಾರೆ.

ಡಿ.ಕೆ.

ಶಿವಕುಮಾರ್ ವಿರುದ್ಧ ರೊಚ್ಚಿಗೆದ್ದಿರುವ ರಮೇಶ ಜಾರಕಿಹೊಳಿ ಇಂದು ಬೆಳಗ್ಗೆ 10.30 ಕ್ಕೆ ಪತ್ರಿಕಾಗೋಷ್ಠಿ ನಡೆಸಿ, ಮಹಾನಾಯಕನಿಗೆ ಸಂಬಂಧಿಸಿದ ಆಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಡಿಕೆಶಿ ವೈಯಕ್ತಿಕ ವಿಚಾರ ಇದೆ ಮಾತನಾಡುತ್ತೇನೆ ಎಂದು ಹೇಳಿದ ರಮೇಶ್ ಜಾರಕಿಹೊಳಿ ಎಂದು ಸುದ್ದಿಗೋಷ್ಠಿ ಕರೆದಿದ್ದಾರೆ.

ಅದಕ್ಕಾಗಿ 40 ಕೋಟಿ ರೂ ಹಣ ಖರ್ಚು ಮಾಡಿದ್ದೇನೆ ಎಂದಿದ್ದ ಆಡಿಯೋ ಸುದ್ದಿಗೋಷ್ಠಿಯಲ್ಲಿ ಇಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಸುದ್ದಿಗೋಷ್ಠಿಯಲ್ಲಿ ರಮೇಶ್ ಜಾರಕಿಹೋಳಿ ಎಲ್ಲರ ಹೆಸರು ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಮಾವೇಶದಲ್ಲಿ ಮಾತನಾಡಿದ ರಮೇಶ ಜಾರಕಿಹೊಳಿ, ಮಹಾನಾಯಕನ ಷಡ್ಯಂತ್ರ ಬಯಲುಗೊಳಿಸುವುದೇ ನನ್ನ ಟಾರ್ಗೆಟ್. ರಾಜಕೀಯ ಷಡ್ಯಂತ್ರದ ವಿರುದ್ಧ ನನ್ನ ಹೋರಾಟ ನಡೆಯಲಿದೆ ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ರೊಚ್ಚಿಗೆದ್ದಿದ್ದಾರೆ. 2023ರಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಯಾವುದೇ ತ್ಯಾಗಕ್ಕೂ ಸಿದ್ಧ. 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗಲು ಈ ಬಾರಿ ನನ್ನ ಸ್ಪರ್ಧೆ. ಆದರೆ ಅದಾದ ಮೇಲೆ 8ನೇ ಬಾರಿ ಸ್ಪರ್ಧಿಸಲು ನನಗೆ ಇಷ್ಟವಿಲ್ಲ.

ನನ್ನ ಬದಲು ಬೇರೆಯವರಿಗೆ ಶಾಸಕನಾಗಲು ಅವಕಾಶ ಕೊಡಲು ನಿರ್ಧರಿಸಿದ್ದೇನೆ. ಆದರೂ, ಎಲ್ಲ ವಿಚಾರವನ್ನು ಪಕ್ಷದ ತೀರ್ಮಾನಕ್ಕೆ ಬಿಡುತ್ತೇನೆ ಎಂದು ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಕೆಶಿ ವಿರುದ್ಧ ಕೊತ ಕೊತ ಕುದಿಯುತ್ತಿರುವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

Leave a Reply

Your email address will not be published. Required fields are marked *

Back to top button