ಸ್ವ ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ
ಯಳಂದೂರು: ತಾಲ್ಲೂಕಿನ ಯರಗಂಬಳ್ಳಿ ಗ್ರಾಮದ ಸುಷ್ಮಾ ಪ್ರೌಢಶಾಲೆಯಲ್ಲಿ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧನಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಎನ್. ಮಹೇಶ್ ರವರು ಭಾಗವಹಿಸಿ ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಗ್ರಾಮಗಳ ಅಭಿವದ್ಧಿಗೆ ಪೂರಕವಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಅವರ ಎಲ್ಲ ಕಾರ್ಯಕ್ರಮಗಳ ಯಶಸ್ಸಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಯೋಜನೆಯ ಕಾರ್ಯಕ್ರಮಗಳು ಶಿಸ್ತುಬದ್ಧವಾಗಿ ಅಳವಡಿಸಲು ಒಕ್ಕೂಟಗಳ ಪದಾಧಿಕಾರಿಗಳು ಪ್ರಮುಖ ಆಧಾರ ಸ್ತಂಭಗಳಾಗಿದ್ದಾರೆ. 20 ರಿಂದ 25 ಸಂಘಗಳಿಗೆ ಒಂದು ಒಕ್ಕೂಟ ರಚನೆ ಮಾಡಲಾಗುತ್ತಿದೆ. ಯೋಜನೆಯ ಹತ್ತು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೆತ್ರ ಧರ್ಮಸ್ಥಳ ಸಂಘದ ಯೋಜನಾಧಿಕಾರಿ ಪ್ರವೀಣ್ ಸಂಘದ ಮಹಿಳಾ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಎಸ್. ಪುಟ್ಟಸ್ವಾಮಿ ಹೊನ್ನೂರು, ಟಿವಿ 8 ಕನ್ನಡ, ಯಳಂದೂರು