ಚಾಮರಾಜನಗರ
6.60 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ
ಚಾಮರಾಜನಗರ: ಕೋಟ್ಯಂತರ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಎನ್. ಮಹೇಶ್ ಚಾಲನೆ ನೀಡಿದರು. ಕೊಳ್ಳೇಗಾಲ ಪಟ್ಟಣದ ಭೀಮನಗರ, ಡಾ. ಶಿವಕುಮಾರ ಸ್ವಾಮಿ ಬಡಾವಣೆ, ಆರ್. ಎಂ. ಸಿ ರಸ್ತೆ ಸೇರಿದಂತೆ ವಿವಿಧ ವಾರ್ಡ್ ಗಳಲ್ಲಿ ನಾಗರೋತ್ಥಾನ ಯೋಜನೆ ಅಡಿಯಲ್ಲಿ ನಾಲ್ಕನೇ ಹಂತದ ಏಳು ಕಾಮಗಾರಿಗೆ ಚಾಲನೆ ನೀಡಲಾಯಿತು.
ಸುಮಾರು 6.60 ಕೋಟಿ ರೂಪಾಯಿ ವೆಚ್ಚದ ಸಿ. ಸಿ. ರಸ್ತೆ, ಚರಂಡಿ, ಇಂಟೆರ್ ಲಾಕ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಎನ್. ಮಹೇಶ್ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಎನ್. ಮಹೇಶ್ ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಮಾಡಿ ಮುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುನಿಲ್, tv8 ಕನ್ನಡ, ಕೊಳ್ಳೇಗಾಲ