ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರದ್ದು
ಯಳಂದೂರು ತಾಲೂಕಿನ ಎ. ದೇವರಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರದ್ದು ಮಾಡಲಾಯಿತು.
ಎ.ದೇವರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕ್ರಮದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸದೆ ಇರುವುದರಿಂದ ಗ್ರಾಮದ ಸಾರ್ವಜನಿಕರು ವಿದ್ಯುತ್ ಸಮಸ್ಯೆ ಸೇರಿದಂತೆ ಮೂಲಭೂತ ಸಮಸ್ಯೆಗಳು ತಾಂಡವಾಡುತ್ತಿದ್ದು ಗ್ರಾಮದ ಜನತೆ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸ್ಥಳಕ್ಕೆ ಚೆಸ್ಕಾಂ ಇಲಾಖೆ ಅಧಿಕಾರಿಗಳನ್ನು ಕರೆಸಬೇಕೆಂದು ಗ್ರಾಮದ ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಿದ ಅಧಿಕಾರಿಗಳ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಸಮಸ್ಯೆ ಬಗೆಹರಿಸಬೇಕು.
ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ಶಿವರಾಜ್ ರವರು ಗ್ರಾಮಸ್ಥರನ್ನು ಮನವೊಲಿಸುವ ಪ್ರಯತ್ನ ಮಾಡಿದರು.ಗ್ರಾಮಸ್ಥರು ಪಟ್ಟು ಬಿಡದೆ ಪ್ರತಿಭಟನೆ ನಡೆಸಿದ ಹಿನ್ನೆಲೆ ಕಾರ್ಯಕ್ರಮವನ್ನು ರದ್ದುಪಡಿಸಿ ಮುಂದಿನ ದಿನಗಳಲ್ಲಿ ಎಲ್ಲ ಇಲಾಖೆ ಅಧಿಕಾರಿಗಳನ್ನು ಕರೆಸುವ ಮೂಲಕ ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಸಭೆಯನ್ನು ರದ್ದುಪಡಿಸಿದರು.
ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ರಾಜಶೇಖರ್ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಘು ಗ್ರಾಮದ ಕೆಲವು ಮುಖಂಡರು ಭಾಗವಹಿಸಿದ್ದರು
ಎಸ್. ಪುಟ್ಟಸ್ವಾಮಿ ಹೊನ್ನೂರು, ಟಿವಿ 8 ಕನ್ನಡ, ಯಳಂದೂರು