ರಾಜಕೀಯ ಮುಖಂಡರ ಸಭೆ ನಡೆಸಿದ ಚುನಾವಣಾ ಅಧಿಕಾರಿಗಳು
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕೃಷ್ಣಮೂರ್ತಿ ಮತ್ತು ವರುಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಗೌರವ್ ರಾಜಕೀಯ ಮುಖಂಡರ ಸಭೆ ನಡೆಸಿದ್ದಾರೆ.
ಚುನಾವಣಾ ಅಧಿಕಾರಿ ಕೃಷ್ಣಮೂರ್ತಿ ಮಾತನಾಡಿ, 2023ರ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಈಗಾಗಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿದೆ. ಕಲ್ಯಾಣ ಮಂಟಪಗಳು ಹಾಗೂ ಸಮುದಾಯ ಭವನಗಳು, ಪ್ರಿಂಟಿಂಗ್ ಪ್ರೆಸ್ ಮಾಲೀಕರ ಸಭೆ ನಡೆಸಲಾಗಿದ್ದು, ಕ್ಷೇತ್ರದಲ್ಲಿ ನಿಷ್ಪಕ್ಷಪಾತವಾದ ಮತದಾನ ನಡೆಸಲು ಹಾಗೂ ಚುನಾವಣಾ ಅಕ್ರಮಗಳು ನಡೆಯದಂತೆ ಸೂಚನೆ ನೀಡಲಾಗಿದೆ.
ಹಣ ವರ್ಗಾವಣೆ, ಮತದಾರರಿಗೆ ಆಮಿಷ ತೋರುವುದು. ಸಭೆ ಸಮಾರಂಭಗಳನ್ನು ಮಾಡುವುದು. ನಿಯಮ ಬಾಹಿರ ಚಟುವಟಿಕೆಗಳನ್ನು ಮಾಡದಂತೆ ಮಾಹಿತಿ ನೀಡಲಾಗಿದೆ. ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ನಡೆಯಬೇಕು.
ಶೇಕಡ ನೂರರಷ್ಟು ಮತದಾನವಾಗಬೇಕು ಈ ಬಗ್ಗೆ ಸಾರ್ವಜನಿಕರು ಸಹಕರಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಸಲಾಗುತ್ತದೆ. ಯಾವುದೇ ಸಮಯದಲ್ಲಿ ಚುನಾವಣಾ ಅಕ್ರಮಗಳು ನಡೆಯಬಾರದು. ಸುಳ್ಳು ದೂರುಗಳು ಮಾಡಬಾರದು ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಚುನಾವಣಾ ಆಯೋಗದ ನೀತಿ ನಿಯಮಗಳನ್ನು ತಿಳಿಸಲಾಗಿದೆ.
ಬಳಿಕ ವರುಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಗೌರವ್ ಮಾತನಾಡಿ, ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುವಂತಿಲ್ಲ. ಪ್ರಗತಿಯಲ್ಲಿರುವ ಕಾಮಗಾರಿಗಳು ಮಾತ್ರ ಕೆಲಸ ಮಾಡಬೇಕು. ಸಭೆ ಸಮಾರಂಭಗಳು ಮೆರವಣಿಗೆಗಳು ಪ್ರತಿಯೊಂದಕ್ಕೂ ಅನುಮತಿ ತೆಗೆದುಕೊಂಡು ಮಾಡಬೇಕು. ಸಾಮಾಜಿಕ ಜಾಲತಾಣದಲ್ಲಿ ಹಾಗೂ ವಾಟ್ಸಪ್ ಗಳಲ್ಲಿ ಚುನಾವಣಾ ಪ್ರಚಾರ ಮಾಡುವಂತಿಲ್ಲ. ಗೂಗಲ್ ಪೇ, ಫೋನ್ ಪೇ ಮೂಲಕ ಹಣವನ್ನು ವರ್ಗಾವಣೆ ಮಾಡುವಂತಿಲ್ಲ. ಈ ಬಗ್ಗೆ ತಂಡವನ್ನು ರಚನೆ ಮಾಡಲಾಗಿದ್ದು, ಎಲ್ಲವನ್ನು ಗಮನಿಸುತ್ತಾರೆ ಆದ್ದರಿಂದ ಚುನಾವಣಾ ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದಲ್ಲಿ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಪ್ರಿಂಟಿಂಗ್ ಪ್ರೆಸ್ ಮಾಲೀಕರು, ಕಲ್ಯಾಣ ಮಂಟಪಗಳ ಮಾಲೀಕರು ಸಭೆಯಲ್ಲಿ ಭಾಗವಹಿಸಿದರು.