ರಾಯಚೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರು ಮಹಿಳೆಯರಿಗೆ ಗಾಯ
ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇನ್ನೊಂದೆಡೆ, ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಮಹಿಳೆಯರು ಗಾಯಗೊಂಡಿದ್ದಾರೆ
.
ಸ್ಫೋಟದ ರಭಸಕ್ಕೆ ಮನೆಯ ಬಾಗಿಲ ಬಳಿ ಇದ್ದ ಮಹಿಳೆ ಹೊರಗಡೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಿನ್ನೆ ಮಧ್ಯಾಹ್ನ ಖಾಜಾ ಬೀ ಎನ್ನುವವರು ಅಡುಗೆ ಅನಿಲ ಬಳಕೆ ಮಾಡಲು ಹೋದಾಗ ಏಕಾಏಕಿ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಪರಿಣಾಮ ಮನೆ ಕೆಲಸ ಮಾಡಲು ಬಂದ ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಸಿಲಿಂಡರ್ ಬ್ಲಾಸ್ಟ್ನಿಂದಾಗಿ ಮನೆಯ ಬಾಗಿಲು ಮುರಿದು ತುಣುಕುಗಳು ಹಾಗೂ ಮನೆಯೊಳಗೆ ಇದ್ದ ಮಹಿಳೆ ಹೊರಗಡೆ ರಸ್ತೆಯ ಮೇಲೆ ಬಂದು ಬಿದ್ದಿರುವ ಭಯನಕ ದೃಶ್ಯ ಬಡಾವಣೆಯಲ್ಲಿ ಆಡಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ
.
ತೀವ್ರ ಸ್ಫೋಟದಿಂದಾಗಿ ಸುತ್ತಮುತ್ತಲಿನ ನಿವಾಸಿಗಳಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಒಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
: ಮನೆಯಲ್ಲಿ ಭೀಕರ ಸ್ಫೋಟ: ನಾಲ್ವರ ಸಾವು, 2 ಕಿಮೀವರೆಗೂ ಕೇಳಿಸಿದ ಸ್ಫೋಟದ ಸದ್ದು