ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ..? |tv8kannada
,ಏ.9- ಎಲ್ಲವೂ ನಿರೀಕ್ಷೆಯಂತೆ ನಡೆದರೆ ನಾಳೆ ಬಿಜೆಪಿಯ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಕೆಲವು ಕ್ಷೇತ್ರಗಳಿಗೆ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿರುವುದರಿಂದ ಸ್ವಲ್ಪ ವಿಳಂಬವಾಗಿದೆ ಎಂದು ತಿಳಿಸಿದರು.ಸಂಜೆ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಪ್ರತಿಯೊಂದು ಕ್ಷೇತ್ರಗಳ ಬಗ್ಗೆ ವರಿಷ್ಠರು ಚರ್ಚಿಸಿ ಯಾರಿಗೆ ಟಿಕೆಟ್ ನೀಡಬೇಕೆಂದು ಚರ್ಚಿಸಲಿದ್ದಾರೆ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕಾಗುತ್ತದೆ ಎಂದರು
ಪಕ್ಷದ ಕೋರ್ ಕಮಿಟಿಯು ಸುದೀರ್ಘ ಚರ್ಚೆ ನಡೆಸಿ ಕೇಂದ್ರ ಚುನಾವಣಾ ಸಮಿತಿಗೆ ಪಟ್ಟಿ ಕಳುಹಿಸಿಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ, ಸಮೀಕ್ಷೆಗಳನ್ನು ಆಧರಿಸಿ ಟಿಕೆಟ್ ಅಂತಿಮಗೊಳಿಸಲಾಗುತ್ತದೆ. ಟಿಕೆಟ್ ಕೈ ತಪ್ಪಿದವರು ಅಸಮಾಧಾನಗೊಳ್ಳುವುದು ಸರ್ವೆಸಾಮಾನ್ಯ ಎಂದು ಅಭಿಪ್ರಾಯಪಟ್ಟರು.
ಇನ್ನು ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವುದೇ ಕ್ಷೇತ್ರಕ್ಕೂ ಈ ಕ್ಷಣದವರೆಗೂ ಹೆಸರು ಅಂತಿಮಗೊಂಡಿಲ್ಲ. ಏಕಕಾಲದಲ್ಲಿ ಎಲ್ಲ ಕ್ಷೇತ್ರಗಳಿಗೂ ಬಿಡುಗಡೆಯಾಗುತ್ತದೆಯೋ ಅಥವಾ ಎರಡರಿಂದ ಮೂರು ಹಂತವಾಗುತ್ತದೆಯೋ ಗೊತ್ತಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.
#FirstList, #BJP, #Candidates, #Released, #AssemblyElection2023, #AssemblyElection, #KarnatakaAssemblyElection,