ಬಿಜೆಪಿ ಅಭ್ಯರ್ಥಿಯಿಂದ ನೀತಿಸಂಹಿತೆ ಉಲ್ಲಂಘನೆ: ಚುನಾವಣಾಧಿಕಾರಿಗೆ ದೂರು
ತುಮಕೂರು: ಗ್ರಾಮಾಂತರ ಕ್ಷೇತ್ರ ಗೂಳೂರು ಜಿಲ್ಲಾಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ತಡರಾತ್ರಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಬಿಜೆಪಿ ಅಭ್ಯರ್ಥಿ ಸುರೇಶ್ ಗೌಡ ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗೂಳೂರು ಜಿಲ್ಲಾಪಂಚಾಯ್ತಿ ಜೆಡಿಎಸ್ ಉಸ್ತುವಾರಿ ಜಿ.ಪಾಲನೇತ್ರಯ್ಯ, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಹಾಲನೂರು ಅನಂತಕುಮಾರ್ ನೇತೃತ್ವದಲ್ಲಿ ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿ ವಿರುದ್ದ ದೂರು ನೀಡಿದ್ದಾರೆ.
ರಾತ್ರಿ 10 ಗಂಟೆ ಮೇಲೆ ಚುನಾವಣಾ ಪ್ರಚಾರ ಕೈಗೊಳ್ಳಬಾರದೆಂದು ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಬಿಜೆಪಿ ಅಭ್ಯರ್ಥಿ ಬಿ ಸುರೇಶ್ ಗೌಡ ಭಾನುವಾರ ತಡರಾತ್ರಿ ಬೈರಸಂದ್ರ ನೇರಳಾಪುರ ಸಿದ್ದಾಪುರ ಕೊಟ್ಟಿಗೆಗೊಲ್ಲಹಳ್ಳಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ ಈ ಬಗ್ಗೆ ಕಂಟ್ರೋಲ್ ರೂಂ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿಗೆ ದೂರು ನೀಡಿದ್ದರು ಸಹ ಚುನಾವಣಾ ಸಿಬ್ಬಂದಿ ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ತುಮಕೂರು ಡಿ ವೈ ಎಸ್ ಪಿ ವಿನಾಕಾರಣ ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ, ಬೆಳ್ಳಾವಿ ಠಾಣೆ ಪಿಎಸ್ಐ ಹಾಗೂ ಕ್ಯಾತ್ಸಂದ್ರ ಠಾಣೆ ಪಿಎಸ್ಐ ಕಾರು ಚಾಲಕ ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಇವರ ವಿರುದ್ದ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು,ನ್ಯಾಯಸಮ್ಮತ ಚುನಾವಣೆ ಮಾಡಲು ಅದಿಕಾರಿಗಳೇ ಅಡ್ಡಗಾಲು ಹಾಕುತ್ತಿದ್ದಾರೆ ಇವರುಗಳ ವಿರುದ್ದ ಶಿಸ್ತು ಕ್ರಮಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ಚುನಾವಣಾಧಿಕಾರಿಗಳಾದ ಉಪವಿಭಾಗಾಧಿಕಾರಿ ಹೋಟೆಲ್ ಶಿವಪ್ಪ ಜೆಡಿಎಸ್ ಕಾರ್ಯಕರ್ತರಿಂದ ದೂರುಸ್ವೀಕರಿಸಿದರಲ್ಲದೆ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ದ ಕ್ರಮಜರುಗಿಸುವುದಾಗಿ ತಿಳಿಸಿದರು.
ಇದೇ ವೇಳೆ ಜೆಡಿಎಸ್ ಜಿಲ್ಲಾಕಾರ್ಯಾಧ್ಯಕ್ಷ ಹಾಲನೂರುಅನಂತಕುಮಾರ್ ಮಾತನಾಡಿ ಗ್ರಾಮಾಂತರದ ಬಿಜೆಪಿ ಅಭ್ಯರ್ಥಿ ಚುನಾವಣಾ ನೀತಿ ಸಮಿತಿ ಗಳಿಗೆ ತೂರಿ ತಡರಾತ್ರಿಯವರೆಗೂ ಚುನಾವಣಾ ಪ್ರಚಾರ ಹಮ್ಮಿಕೊಳ್ಳುತ್ತಿದ್ದಾರೆ, ಜನರಿಗೆ ನಾನಾ ರೀತಿಯ ಆಮಿಷ ಒಡ್ಡಿ ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ, ಹಣದ ಹೊಳೆಯನ್ನು ಹರಿಸುತ್ತಿದ್ದಾರೆ ಇದು ಅಕ್ಷಮ್ಯ ಅಪರಾದ ಚುನಾವಣಾ ಅಕ್ರಮ ಎಸಗುತ್ತಿರುವ ಇವರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಪೊಲೀಸ್ ಸಿಬ್ಬಂದಿ ಸಹ ಬಿಜೆಪಿ ಅಭ್ಯರ್ಥಿ ಪರ ಶಾಮೀಲಾಗಿ ಕೆಲಸ ಮಾಡಿ ಕಾನೂನು ವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಅವರುಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಇದೇ ವೇಳೆ ಒತ್ತಾಯಿಸಿದರು. ಗೂಳೂರು ಜಿಲ್ಲಾ ಪಂಚಾಯಿತಿ ಜೆಡಿಎಸ್ ಉಸ್ತುವಾರಿ ಜಿ ಪಾಲನೇತ್ರಯ ಮಾತನಾಡಿ ಡಿಸಿ ಗೌರಿಶಂಕರ್ ಶಾಸಕರಾದ ಮೇಲೆ ಬೈರಸಂದ್ರ ಗ್ರಾಮ ದಲ್ಲಿ ಮೂರು ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಾಗಿವೆ. ಬಿ ಸುರೇಶ್ ಗೌಡ ಶಾಸಕರಾಗಿದ್ದ ಅವಧಿಯಲ್ಲಿ ಬೈರಸಂದ್ರ ಗ್ರಾಮದ ರಸ್ತೆ ಅಭಿವೃದ್ಧಿಗೆ ಅನುದಾನ ಕೇಳಲು ಹೋದಾಗ ಲಿಂಗಾಯಿತರು ಇರುವ ಬೀದಿಗೆ ಅನುದಾನ ನೀಡುವುದಿಲ್ಲ ಎಂದು ತಾರತಮ್ಯ ಮಾಡಿದ್ದರು ಆದರೆ ಡಿಸಿ ಗೌರಿಶಂಕರ್ ಯಾವುದೇ ತಾರತಮ್ಯ ಮಾಡದೆ ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ ಡಿ ಸಿ ಗೌರಿಶಂಕರ್ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ತನ್ನ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಸುಳ್ಳು ಹೇಳಿ ಜನರಿಗೆ ಟೋಪಿ ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದರು.
ಬಿಜೆಪಿ ಅಭ್ಯರ್ಥಿ ಬಿ ಸುರೇಶ್ ಗೌಡ ತಡರಾತ್ರಿವರೆಗೂ ಚುನಾವಣಾ ಪ್ರಚಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು ಸಹ ಕ್ರಮಕ್ಕೆ ಮುಂದಾಗುತ್ತಿಲ್ಲ ಚುನಾವಣಾಧಿಕಾರಿಗಳು ಸಹ ಬಿಜೆಪಿ ಅಭ್ಯರ್ಥಿಯೊಂದಿಗೆ ಶಾಮೀಲಾಗಿದ್ದು ಇವರ ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿದರು. ಈ ವೇಳೆ ಜೆಡಿಎಸ್ ಮುಖಂಡರಾದ ಬೆಳಗುಂಬ ವೆಂಕಟೇಶ್, ಹರಳೂರು ಪ್ರಕಾಶ್. ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು