ಮೈಸೂರು

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಹೈ ಅಲರ್ಟ್

ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡುವ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಚುನಾವಣಾ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ.
ನಂಜನಗೂಡು ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿರುವ ವರುಣ ವಿಧಾನಸಭಾ ಕ್ಷೇತ್ರದ ಕಛೇರಿಯಲ್ಲಿ ಚುನಾವಣಾ ಅಧಿಕಾರಿ ಗೌರವ್ ಕುಮಾರ್ ಶೆಟ್ಟಿ ಮಾತನಾಡಿ, ಸಾರ್ವಜನಿಕರ ಮಾಹಿತಿ ಗಾಗಿ ಕಂಟ್ರೋಲ್ ರೂಂ ಸ್ಥಾಪಿಸಿ, ಪ್ರತ್ಯೇಕ ದೂರು ನೀಡಲು ವಾಟ್ಸಪ್ ನಂಬರ್ ತೆರೆಯಲಾಗಿದೆ.


ಕಂಟ್ರೋಲ್ ರೂಂ ನಂಬರ್ 82212 95523 ಅಥವಾ ನೋಡಲ್ ಅಧಿಕಾರಿ ವಾಟ್ಸ್ ಆ್ಯಪ್ ನಂಬರ್ 9739598830 ಸಂಖ್ಯೆಗೆ ಸಾರ್ವಜನಿಕರು ಸಂಪರ್ಕಿಸಬಹುದು.
ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ಮತ್ತು ಅಕ್ರಮ ಸಾಗಾಟ ಕಂಡುಬಂದಲ್ಲಿ ಕಂಟ್ರೋಲ್ ರೂಂ ನಂಬರಿಗೆ ಕರೆ ಮಾಡಿದರೆ ಮುಲಾಜಿಲ್ಲದ ಕ್ರಮ ಕೈಗೊಳ್ಳುತ್ತೇವೆ. ರಾಜ್ಯ ಚುನಾವಣೆ ಅಧಿಕಾರಿಗಳ ಆದೇಶದ ಮೇರೆಗೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ವಾಟ್ಸಪ್ ನಂಬರನ್ನು ಅರಿ ಬಿಡಲಾಗಿದೆ.


ವರುಣ ವಿಧಾನಸಭಾ ಕ್ಷೇತ್ರದ ಮತದಾನದ ಕೇಂದ್ರಗಳಲ್ಲಿ ಸಾಕಷ್ಟು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮತದಾನ ನಡೆಯುವ ಕೇಂದ್ರ ಸ್ಥಾನಗಳಲ್ಲಿ ಶೌಚಾಲಯ, ಕುಡಿಯುವ ನೀರು, ಸಿಬ್ಬಂದಿಗಳಿಗೆ ಫ್ಯಾನ್ ಸೌಲಭ್ಯ, ಸೇರಿದಂತೆ ಸಾಕಷ್ಟು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮತದಾನ ಮಾಡಲು ತೆರಳುವ ಮತದಾರರಿಗೂ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಈಗಾಗಲೇ ಸಿದ್ಧತೆ ನಡೆಸಲಾಗಿದೆ.‌ಮತದಾನ ಮಾಡಲು ತೆರಳುವ ಮತದಾರರಿಗೆ ಯಾವುದೇ ಕುಂದು ಕೊರತೆಗಳು ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವರುಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button