ಚಾಮರಾಜನಗರ

ಮನೆ ಮನೆಗೆ ತೆರಳಿ JDS ಅಭ್ಯರ್ಥಿ ಬಿ.ಪುಟ್ಟಸ್ವಾಮಿ ಮತಯಾಚನೆ

ಯಳಂದೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಪುಟ್ಟಸ್ವಾಮಿ ಕಾರ್ಯಕರ್ತರ ಜೊತೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಬಿ ಪುಟ್ಟಸ್ವಾಮಿ ತಮ್ಮ ಅಭಿಮಾನಿಗಳು ಕಾರ್ಯಕರ್ತರ ಜೊತೆ ದೇವಾಲಯದಲ್ಲಿ ವಿಶೇಷ ಪೂಜ್ಯ ಸಲ್ಲಿಸಿ ನಂತರ ಗಿರಿಜನ ಹಾಡಿಗಳಲ್ಲಿ ಮತಯಾಚನೆ ಮಾಡಿದರು.

ನಂತರ ತಾಲೂಕಿನ ಕೋಮಾರನಪುರ,ಗುಂಬಳ್ಳಿ ಯರಗಂಬಳ್ಳಿ, ಕೃಷ್ಣಾಪುರ ಉಪ್ಪಿನ ಮೊಳೆ, ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡಿ ನಂತರ ಮಾತನಾಡಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಜನರಿಗೆ ಕೊಟ್ಟಂತಹ ಜನಪರ ಯೋಜನೆಗಳು ಹಾಗೂ ಪಂಚ ರತ್ನ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಆದರಿಂದ ಕೊಳ್ಳೇಗಾಲ ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಮತಗಳನ್ನು ತೆನೆ ಹೊತ್ತ ಮಹಿಳೆ ಗುರುತಿಗೆ ನೀಡಬೇಕೆಂದು ಮನವಿ ಮಾಡಿದರು.


ಇದೇ ಸಂದರ್ಭದಲ್ಲಿ ವಿವಿಧ ಗ್ರಾಮದ ಮುಖಂಡರು V ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button