ಬೆಂಗಳೂರು ನಗರ

ನಾಳೆ ಮತ ಏಣಿಕೆ : 34 ಮತಕೇಂದ್ರಗಳಿಗೆ ಭಾರೀ ಭದ್ರತೆ

ಕಳೆದ ೧೦ ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ಜರುಗಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಈಗಾಗಲೇ ಸಕಲ ಸಿದ್ಧತೆ ಕೈಗೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಶೇಕಡ ೭೨.೮೧ ರಷ್ಟು ಮತದಾನವಾಗಿದೆ ಎಂದು ಆಯೋಗ ತಿಳಿಸಿದೆ. ೨೦೧೮ರ ಚುನಾವಣೆಯಲ್ಲಿ ಶೇಕಡ ೫೬.೯೨ರಷ್ಟು ಮತದಾನವಾಗಿತ್ತು. ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳ ಎಲ್ಲ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ ೩ ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳು ಸ್ಟ್ರಾಂಗ್ ರೂಂ ಕೇಂದ್ರಗಳಿಗೆ ಭೇಟಿ ನೀಡಿ ಸುರಕ್ಷತೆಯನ್ನು ಪರಿಶೀಲಿಸಿದರು. ನಾಳೆ ೩೪ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ನಾಳೆಯೇ ಫಲಿತಾಂಶ ಹೊರಬೀಳುವ ನಿರೀಕ್ಷೆದೆ.

Related Articles

Leave a Reply

Your email address will not be published. Required fields are marked *

Back to top button