ವಿಧಾನಸಭೆ ಚುನಾವಣೆ ಫಲಿತಾಂಶ : ಯಾವ ಕ್ಷೇತ್ರದಲ್ಲಿ, ಯಾವ ಪಕ್ಷಕ್ಕೆ ಗೆಲುವು? ಇಲ್ಲಿದೆ ಮಾಹಿತಿ
ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದಂತ ಮತದಾನ ಮತಎಣಿಕೆ ಕಾರ್ಯ ಮುಕ್ತಾಯವಾಗಿದ್ದು. ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. 224 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 113ರ ಗಡಿದಾಟಿ 135ಸೀಟುಗಳನ್ನು ಗೆದ್ದಿದೆ.
ಚುನಾವಣಾ ಆಯೋಗದ ಮಾಹಿತಿಯಂತೆ ಬಿಜೆಪಿ 66 ಕ್ಷೇತ್ರಗಳಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ, ಜೆಡಿಎಸ್ 19 ಕ್ಷೇತ್ರಗಳಲ್ಲಿ ಪಕ್ಷೇತರರು ಎರಡು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಒಬ್ಬರು, ಸರ್ವೋದಯ ಪಕ್ಷದಿಂದ ಒಬ್ಬರು ಗೆಲುವು ಸಾಧಿಸಿದ್ದಾರೆ. ಈ ಮೂಲಕ 224 ಕ್ಷೇತ್ರಗಳಲ್ಲಿ 223 ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದಿದೆ.
ಹೀಗಿದೆ ಕ್ಷೇತ್ರವಾರು ಅಭ್ಯರ್ಥಿಗಳು ಪಡೆದ ಮತ, ಗೆಲುವು- ಸೋಲಿನ ಅಂತರ
ಇಂದು ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ: ಸಿಎಂ ಆಯ್ಕೆ ಬಗ್ಗೆ ಚರ್ಚೆಬೆಂಗಳೂರು: ಇಂದು ಸಂಜೆ 5.30ಕ್ಕೆ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಿಎಂ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದ್ದು, ಸಿ ಎಲ್ ಪಿ ನಾಯಕರು ಯಾರು ಎಂಬುದಾಗಿ ಘೋಷಣೆ ಮಾಡಲಿದೆ.ಈ ಕುರಿತಂತೆ ಮಾಹಿತಿ ನೀಡಿದಂತ ಕರ್ನಾಟಕ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಮೊದಲ ಸಭೆಯನ್ನು ಭಾನುವಾರ ಸಂಜೆ 5:30 ಕ್ಕೆ ಕರೆಯಲಾಗಿದೆ’ ಎಂದು ಹೇಳಿದ್ದಾರೆ.
ಪುಣ್ಯ ಗೌಡ ಪೊಲಿಟಿಕಲ್ ಬ್ಯುರೋ ಬೆಂಗಳೂರು