ಸೋಲು ಗೆಲುವು ರಾಜಕಾರಣದಲ್ಲಿ ಇದ್ದಿದ್ದೆ: ಹಂಗಾಮಿ ಸಿಎಂ ಬೊಮ್ಮಾಯಿ
ಬೆಂಗಳೂರು: ಸೋಮಣ್ಣನವರು ಯಾವಾಗ ಹಿನ್ನೆಡೆ ಆದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಸೋಮಣ್ಣ ನಮ್ಮ ಹಿರಿಯ ನಾಯಕರು. ಸುಮಾರು 40 ವರ್ಷ ಜನಸೇವೆ ಮಾಡಿದವರು. ವಸತಿ ಸಚಿವರಾಗಿ ಅವರು ಬೆಂಗಳೂರಿನ ಅಭಿವೃದ್ಧಿಗೆ ಅನೇಕ ಕೊಡುಗೆ ಕೊಟ್ಟಿದ್ದಾರೆ. ಗೋವಿಂದರಾಜ ನಗರವನ್ನು ಮಾದರಿ ಕ್ಷೇತ್ರ ಮಾಡಿದ್ದಾರೆ. ಸೋಲು ಗೆಲುವು ರಾಜಕಾರಣದಲ್ಲಿ ಇದ್ದಿದ್ದೆ. ಅದನ್ನು ಮೀರಿ ಮತ್ತೆ ಬರಬೇಕು. ಸೋಮಣ್ಣ ಮತ್ತು ಪಕ್ಷ ಎರಡು ಕೂಡ ಆ ಕೆಲಸ ಮಾಡಲಿದೆ ಎಂದು ಹಂಗಾಮಿ ಸಿಎಂ ಬೊಮ್ಮಾಯಿ ಹೇಳಿದರು.
ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ತಿಳಿದ ಮೇಲಷ್ಟೇ ಮಾತನಾಡಬಹುದು. ನಾಳೆ ಅಥವಾ ನಾಡಿದ್ದು ಅಧ್ಯಕ್ಷರು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಾಡಬಹುದು ಎಂದು ಬೊಮ್ಮಾಯಿ ಹೇಳಿದರು.