ಡಾ.ವಿಷ್ಣು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸುದ್ದಿಗೋಷ್ಠಿ
ಜನವರಿ 8 ರಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಡಾ.ವಿಷ್ಣುವರ್ಧನ್ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲಾರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ. ವಿಷ್ಣು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಹ್ವಾನ ಮಾಡಲಾಯಿತು.
ಡಾ. ವಿಷ್ಣು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ಕೆ. ಆರ್ ಬಾಲರಾಜು ರವರು ಮಾತನಾಡಿ ಡಾ. ವಿಷ್ಣುವರ್ಧನ್ ರವರ 13ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಡಾ.ವಿಷ್ಣು ಸಮಾಜ ಸೇವಾ ಟ್ರಸ್ಟ್ ಹಾಗೂ ಪ್ರಲಕ್ಷ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮೈಸೂರು ಇವರ ಸಹಯೋಗದಲ್ಲಿ ಬೃಹತ್ ಮಟ್ಟದ ಉಚಿತ ಆರೋಗ್ಯ ತಪಾಸಣೆ, ವಿವಿಧ ಶಾಲಾ ಮಕ್ಕಳು ಮಕ್ಕಳಿಗೆ ನೋಟ್ ಬುಕ್ ವಿತರಣೆ, ಅನ್ನದಾನ ಕಾರ್ಯಕ್ರಮ, ಗಣ್ಯರಿಗೆ ಸನ್ಮಾನ ಹಾಗೂ ರಸ ಮಂಜರಿ ಕಾರ್ಯವನ್ನು ಕೊಳ್ಳೇಗಾಲದ ಚೌಡೆಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.
ನಂತರ ಸಮಿತಿಯ ಪದಾಧಿಕಾರಿಗಳು ಕಾರ್ಯಕ್ರಮ ಆಹ್ವಾನದ ಪೋಸ್ಟರ್ ಬಿಡುಗಡೆ ಮಾಡಿದರು. ಸುದ್ದಿ ಘೋಷ್ಠಿಯಲ್ಲಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮಲ್ಲು ಸ್ವಾಮಿ, ಉಪಾಧ್ಯಕ್ಷರು ಕಾಂತರಾಜು, ಖಚಾಂಜಿ ಭಗವಾನ್, ಸಂಚಾಲಕರು ಕನಕರಾಜು,ಕಾರ್ಯದರ್ಶಿ ಬಿ ಎಸ್.ಶಿವಕುಮಾರ್ ಪಾಳ್ಯ ಹಾಜರಿದ್ದರು.
ಎಸ್. ಪುಟ್ಟಸ್ವಾಮಿ ಹೊನ್ನೂರು, ಟಿವಿ 8ಕನ್ನಡ, ಯಳಂದೂರು