ಟಾಪ್-ನ್ಯೂಸ್
ಲೋಕಸಭೆಯಲ್ಲಿ ಇಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ
ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ.
ಇದೇ ವೇಳೆ ಬಜೆಟ್ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿ ಮಾಡಿ ಬಜೆಟ್ಗೆ ಸಂಬಂಧಪಟ್ಟಂತೆ ಭೇಟಿ ಮಾಡಿದರು.
ಬಳಿಕ ಅವರು ಸಂಸತ್ತು ಭವನಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಭಾಗಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನಕ್ಕೆ ಆಗಮಿಸಿದ್ದಾರೆ.ಕೇಂದ್ರ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ಭವನದಿಂದ ಹೊರಟು ಸಂಸತ್ ಭವನವನ್ನು ತಲುಪಿದ್ದಾರೆ. ಕ್ಯಾಬಿನೆಟ್ ಸಭೆ ಪ್ರಾರಂಭವಾಗಿದ್ದು, ಸಭೆಯ ನಂತರ, ಹಣಕಾಸು ಸಚಿವರು ತಮ್ಮ ಬಜೆಟ್ ಅನ್ನು ಮಂಡಿಸಲಿದ್ದಾರೆ.