ಚಾಮರಾಜನಗರ
ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ರಸ್ತೆ ತಡೆದು ರೈತರ ಪ್ರತಿಭಟನೆ
ಯಳಂದೂರು.ಪಟ್ಟಣದ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ರೈತ ಸಂಘದಿಂದ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು
.ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತ ಪಡಿಸಿದರು. ಸ್ಥಳಕ್ಕೆ ಡಿ.ಸಿ.ಎಫ್. ರವರು ಬಂದು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ ಯಳಂದೂರು ತಾಲ್ಲೂಕಿನಲ್ಲಿ ಕಾಡಾನೆ ಹಾವಳಿ ಹೆಚ್ಚಿದೆ.ಆನೆಗಳು ಹಾಡಹಗಲೇ ಜಮೀನಿಗೆ ನುಗ್ಗುತ್ತಿವೆ,ರೈತರು ಆತಂಕದಲ್ಲಿಯೇ ದಿನ ಕಳೆಯುವಂತಾಗಿದೆ,ಅರಣ್ಯ ಇಲಾಖೆ, ಜನಪ್ರತಿನಿಧಿಗಳು ಕಿಂಚಿತ್ತೂ ಗಮನಹರಿಸುತ್ತಿಲ್ಲ,ಬತ್ತ, ಅಡಿಕೆ, ಬಾಳೆ, ಕಾಫಿ, ತೆಂಗು ಬೆಳೆಗೆ ಹಾನಿಯಾಗಿದೆ.ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ.
ಕೃಷಿ ಭೂಮಿ ಹಾಗೂ ಉತ್ಪನ್ನಗಳನ್ನು ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ. ಈ ಬಗ್ಗೆ ಹಲವು ಬಾರಿ ಅರಣ್ಯಾಧಿಕಾರಿಗೆ ಮನವಿ ಮಾಡಿದರೂ, ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿದರು.ರೈತ ಗೌಡಳ್ಳಿ ಸೋಮಣ್ಣ ಮಾತನಾಡಿ ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ನಷ್ಟದ ಪ್ರಮಾಣ ಹೆಚ್ಚಾಗಿದೆ. ಕಾಡಾನೆಗಳ ಹಿಂಡು ತೋಟಕ್ಕೆ ನುಗ್ಗಿ,ಕಬ್ಬು, ಬಾಳೆ, ಅಡಿಕೆ ಗಿಡಗಳನ್ನು ನಾಶಪಡಿಸುತ್ತಿವೆ. ಇಳುವರಿಗೂ ಸಂಚಕಾರ ತಂದೊಡ್ಡುತ್ತಿವೆ.ಹತ್ತಾರು ಸಮಸ್ಯೆಗಳ ನಡುವೆ ಬೆಳೆದ ಫಸಲು ಕೈ ಸೇರುತ್ತಿಲ್ಲ ಎಂದು ಹೇಳಿದರು.ಪ್ರತಿಭಟನೆ ಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ವೃಷಭೇಂದ್ರ,ನಾಗರಾಜ್,ಮಹದೇವಸ್ವಾಮಿ,ನಾಗೇಂದ್ರ,ಅಂಬಳೆಮಹದೇವಪ್ಪ,ಶ್ರೀನಿವಾಸ,ಹಾಗೂ ರೈತ ಮುಖಂಡರು ಹಾಜರಿದ್ದರು.ವರದಿಎಸ್. ಪುಟ್ಟಸ್ವಾಮಿಹೊನ್ನೂರುಟಿವಿ 8 ಕನ್ನಡ ಯಳಂದೂರು