ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ನೀರಾವರಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ) ವತಿಯಿಂದ 2022-23 ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಮಡಿವಾಳ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹಾಲಿ ಜಮೀನುಗಳು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರವಾರಿ ಸೌಲಭ್ಯ ಹೊಂದಿರಬಾರದು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/- ಗಳ ಒಳಗಿರಬೇಕು. ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.
ಅರ್ಜಿದಾರರು ಅರ್ಜಿಗಳನ್ನು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಮಾರ್ಚ್ 03 ರೊಳಗೆ ಸಲ್ಲಿಸಬಹುದು.ಅರ್ಜಿದಾರರು ಹಿಂದೆ ನಿಗಮದ ಯಾವುದಾದರೂ ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ), ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು-10 ಅಥವಾ ನಿಗಮದ ವೆಬ್ ಸೈಟ್ https://www.kmmd.karnataka.gov.in ಅಥವಾ ಬೆಂಗಳೂರು ದಕ್ಷಿಣ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 080-23156006, 8050773004/5, 8050370006, 7090400100 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.