ಇಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಆಗಮನ; ಜನ ಹೊಸ ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದಾರೆ: ಸುಮಲತಾ
ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ಎಲ್ಲಾ ರೀತಿಯ ತಯಾರಿ ನಡೆದಿದೆ. ದಶಪಥ ರಸ್ತೆಯಲ್ಲಿ ಕೇಸರಿ ಬಾವುಟ ರಾರಾಜಿಸುತ್ತಿದೆ. ಮದ್ದೂರಿನಲ್ಲಿ ಬೃಹತ್ ಸಮಾವೇಶ. ಭರ್ಜರಿ ರೋಡ್ಶೋಗೆ ಹೈವೇ ರೆಡಿಯಾಗಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಭೇಟಿ ಹಿನ್ನೆಲೆ ಪ್ರಧಾನಿಯನ್ನು ಸಂಸದೆ ಸುಮಲತಾ ಸ್ವಾಗತಿಸಲಿದ್ದಾರೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಬಳಿಕ ಮೊದಲ ಬಾರಿ ಮಂಡ್ಯಕ್ಕೆ ಮೋದಿ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಇಂದು ಮೋದಿಗೆ ಸಾವಯವ ಬೆಲ್ಲ ಉಡುಗೊರೆ ನೀಡಲಿದ್ದಾರೆಈ ವೇಳೆ ಮಾತನಾಡಿದ ಸುಮಲತಾ ಅಂಬರೀಶ್, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಜನ ಹೊಸ ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಬದಲಾವಣೆ ಗಾಳಿ ಮೇಲ್ನೋಟಕ್ಕೆ ಕಾಣುತ್ತಿಲ್ಲ ಜನರ ಮನಸ್ಸಿನಲ್ಲಿ ಇದೆ. ಮಂಡ್ಯದಲ್ಲಿ ಮೋದಿ 1.8 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ. ಗೆಜ್ಜಲಗೆರೆ ಕಾಲೋನಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಗೆಜ್ಜಲಗೆರೆಯಲ್ಲಿ ಪ್ರಧಾನಿ ಮೋದಿ ಸ್ವಾಗತ ಮಾಡಲಿದ್ದೇವೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನುಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಹೊಸ ಹೆದ್ದಾರಿ ಉದ್ಘಾಟಿಸಲಿದ್ದಾರೆ ಎಂದರು.
ವರದಿ : ಪುಣ್ಯ ಗೌಡ tv8kannada ಬೆಂಗಳೂರು