ಆದ್ಯಾತ್ಮ
ರಾಯಚೂರಿಗೆ ಅಮಿತ್ ಶಾ ಭೇಟಿ; 4100 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಚಾಲನೆ
ದೇವದುರ್ಗ ತಾಲೂಕಿನ ಗಬ್ಬೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾರ್ಚ್ 24ರಂದು ಭೇಟಿ ನೀಡಲಿದ್ದಾರೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು 4100 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡುವರು.ಗಬ್ಬೂರಿನ ಸಿರವಾರ ಕ್ರಾಸ್ ಬಳಿ ಕಾರ್ಯಕ್ರಮ ಆಯೋಜಿಸಿದ್ದು, ಮೂರು ಲಕ್ಷ ಜನರನ್ನು ಸೇರುವ ನಿರೀಕ್ಷೆಯಿದೆ. ಇಂಜಿನಿಯರ್ ಕಾಲೇಜ್, 21 ಕೆರೆ ತುಂಬುವ ಯೋಜನೆ, ರಸ್ತೆ ಮರು ಡಾಂಬರೀಕರಣ, ಜಲಧಾರೆ ಯೋಜನೆ, ದೇವದುರ್ಗ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಜತೆಗೆ ಜಲಧಾರೆ ಯೋಜನೆ ಸೇರಿಸಲಾಗುತ್ತಿದೆ ಎಂದು ತಿಳಿಸಿದರು.
ಮಾ. 26ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಮಿತ್ ಶಾ ಸಮಯ ನೀಡಿದ್ದರಿಂದ 24ರಂದು ಕಾರ್ಯಕ್ರಮ ನಿಗದಿಯಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕರು ಪಾಲ್ಗೊಳ್ಳುವರು.