ದಿವಂಗತ ಮಾಜಿ ಸಂಸದ ಆರ್ ಧ್ರುವನಾರಾಯಣ್ ರವರ 11ನೇ ಪುಣ್ಯಸ್ಮರಣೆ
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ದಿವಂಗತ ಮಾಜಿ ಸಂಸದ ಆರ್ ಧ್ರುವನಾರಾಯಣ್ ರವರ 11ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು
ಶ್ರೀ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ದಿವಗಂತ ಆರ್ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೌನ ಆಚರಿಸಲಾಯಿತು.
ಈ ವೇಳೆ ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಎಂ ನಿರಂಜನ್ ರವರು ಮಾತನಾಡಿ ಈ ರಾಜ್ಯ ಕಂಡ ದಕ್ಷ ಪ್ರಾಮಾಣಿಕ, ರಾಜ್ಯದ ನಂಬರ್ ಒನ್ ಸಂಸದ ಆರ್ ಧ್ರುವನಾರಾಯಣ್ ರವರ ನಿಧನದಿಂದ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಮತ್ತು ಅಭಿಮಾನಿಗಳು ತಬ್ಬಲಿಯಾಗಿದ್ದಾರೆ. ಸಂಘಟನೆಯ ಚತುರನನ್ನು ಕಳೆದುಕೊಂಡ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಅವರ ಸ್ಮರಣೆಯಲ್ಲಿ
ಅವರ ಆದರ್ಶ ಸಂಘಟನೆ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮೂಲಕ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹೆಚ್ಚಿನ ರೀತಿಯಲ್ಲಿ ಬೆಂಬಲಿಸಿ, ಅವರ ಆತ್ಮಕ್ಕೆ ಶಾಂತಿ ಕೊಡಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಡಿ ರೇವಣ್ಣ, ಕಾಂಗ್ರೆಸ್ ಮುಖಂಡರ ಹೆಚ್.ಸಿ.ಸೋಮಣ್ಣ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಸಿದ್ದಪ್ಪಸ್ವಾಮಿ, ಮಹದೇವಸ್ವಾಮಿ, ಎಂ ರಾಜಶೇಖರ್ ಸೇರಿದಂತೆ ಮುಂತಾದವರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ವಿತರಣೆ ಮಾಡಲಾಯಿತು.
ಎಸ್. ಪುಟ್ಟಸ್ವಾಮಿ ಹೊನ್ನೂರು
ಟಿವಿ 8 ಕನ್ನಡ ಯಳಂದೂರು