ಟಾಪ್-ನ್ಯೂಸ್
ನಟ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ
ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಬಿಜೆಪಿಯೊಂದಿಗೆ ಗುರುತಿಸಿಕೊಂಡು ಅವರು ಸ್ಟಾರ್ ಪ್ರಚಾರಕರಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮ್ಮುಖದಲ್ಲಿ ಸುದೀಪ್ ಬಿಜೆಪಿ ಸೇರುವ ಸಾಧ್ಯತೆ ಇದೆ.
ಆದರೆ, ವಿದಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುವುದಿಲ್ಲ. ಚಿಕ್ಕಪೇಟೆ ಕ್ಷೇತ್ರದಿಂದ ಸುದೀಪ್ ಅವರ ಆಪ್ತ ಜಾಕ್ ಮಂಜು ಸ್ಪರ್ಧಿಸುವ ಸಾಧ್ಯತೆ ಇದೆ.
ಸುದೀಪ್ ಅವರನ್ನು ರಾಜಕೀಯ ಕರೆತರುವ ಪ್ರಯತ್ನ ಹಿಂದಿನಿಂದಲೂ ನಡೆಯುತ್ತಿತ್ತು. ಆದರೆ, ಅದು ಕೈಗೂಡಲಿಲ್ಲ. ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಆತ್ಮೀಯ ಒಡನಾಟ ಹೊಂದಿರುವ ಸುದೀಪ್ ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ. ಈಗ ಅವರು ಬಿಜೆಪಿ ಸೇರಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಲಾಗಿದೆ.