ಬೆಂಗಳೂರು ನಗರ

ಮನೆಮನೆಗೆ ತೆರಳಿ ಸಚಿವ ಕೆ.ಗೋಪಾಲಯ್ಯ ಮತಯಾಚನೆ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ 74ನೇ ವಾರ್ಡಿನ ಶಕ್ತಿ ಗಣಪತಿ ನಗರದಲ್ಲಿ ಮಾನ್ಯ ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯನವರು ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಚುನಾವಣಾ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಸ್ಥಳೀಯರು ಕುಂದು ಕೊರತೆಗಳನ್ನು ಸಚಿವರ ಗಮನಕ್ಕೆ ತಂದರು. ಅವರ ಅಹವಾಲುಗಳನ್ನು ಸ್ವೀಕರಿಸಿ ಶೀಘ್ರದಲ್ಲೇ ಪರಿಹರಿಸಲು ಮಾನ್ಯ ಸಚಿವರು ಭರವಸೆ ನೀಡಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಹಾಗೂ ನಮ್ಮ ಕ್ಲಿನಿಕ್, ನವ ನಂದಿನಿ ಪಾರ್ಕ್, ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ಉದ್ಯಾನವನ, ಕೆಂಪೇಗೌಡ ಉದ್ಯಾನವನ ನಿರ್ಮಾಣ ಹಾಗೂ ಕೋವಿಡ್ ಸಂದರ್ಭದಲ್ಲಿ ಜೀವದ ಹಂಗನ್ನು ತೊರೆದು ಕ್ಷೇತ್ರದ ಜನರಿಗೆ ಆರೋಗ್ಯ ಕಿಟ್, ಲಸಿಕೆ ಕೊಡಿಸುವುದು ಹೀಗೆ ಅನೇಕ ಉತ್ತಮ ಕಾರ್ಯಗಳನ್ನು ಮುಂದೆ ಇಟ್ಟು ಮತಯಾಚನೆಯನ್ನು ಮಾಡಿದರು.

ಇದೇ ಸಂದರ್ಭದಲ್ಲಿ ಬಿ.ಡಿ.ಶ್ರೀನಿವಾಸ್, ನಿಸರ್ಗ ಜಗದೀಶ್, ಜಯಸಿಂಹ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪುಣ್ಯ ಗೌಡ, tv8 ಕನ್ನಡ, ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button